ಶಿವಮೊಗ್ಗ: ಚಲಿಸುತ್ತಿದ್ದ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಕೆರೆಗೆ ಉರುಳಿಬಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಇಲ್ಲಿನ ಹೊಸನಗರ ತಾಲೂಕಿನ ಚಿಪ್ಪಿಗರೆ ಬಳಿ ಈ ದುರಂತ ಸಂಭವಿಸಿದೆ. ಮಾರುತಿ ಬಲೆನೊ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಕೆರೆಗೆ ಹೋಗಿ ಬಿದ್ದಿದೆ. ಕಾರಿನಲ್ಲಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ. ಇಬ್ಬರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳೀಯರ ನೆರವಿನಿಂದ ಕಾರನ್ನು ಮೇಲಕೆತ್ತಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.