HomeLatest NewsBREAKING: ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆ: ಚಡಚಣದಲ್ಲಿ SBI ಬ್ಯಾಂಕ್ ಮ್ಯಾನೇಜರ್, ಸಿಬ್ಬಂದಿ ಕಟ್ಟಿ ಹಾಕಿ...

BREAKING: ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆ: ಚಡಚಣದಲ್ಲಿ SBI ಬ್ಯಾಂಕ್ ಮ್ಯಾನೇಜರ್, ಸಿಬ್ಬಂದಿ ಕಟ್ಟಿ ಹಾಕಿ ಅಪಾರ ನಗದು, ಚಿನ್ನ ಲೂಟಿ

ವಿಜಯಪುರ: ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ನಲ್ಲಿ ದರೋಡೆ ನಡೆದಿದೆ. ವಿಜಯಪುರ ಜಿಲ್ಲೆ ಚಡಚಣದಲ್ಲಿ ಎಸ್.ಬಿ.ಐ. ಬ್ಯಾಂಕ್ ಮ್ಯಾನೇಜರ್, ಕ್ಯಾಷಿಯರ್ ಮತ್ತು ಸಿಬ್ಬಂದಿಯ ಕೈಕಾಲು ಕಟ್ಟಿ ಹಾಕಿ ದರೋಡೆ ನಡೆಸಲಾಗಿದೆ.

ಮ್ಯಾನೇಜರ್, ಕ್ಯಾಷಿಯರ್ ಸೇರಿ ಬ್ಯಾಂಕ್ ಸಿಬ್ಬಂದಿಯನ್ನು ಹಗ್ಗದಿಂದ ಕಟ್ಟಿ ಕೂಡಿ ಹಾಕಿ ದರೋಡೆ ನಡೆಸಲಾಗಿದೆ. ದರೋಡೆಕೋರರು ಅಪಾರ ನಗದು, ಚಿನ್ನವನ್ನು ದೋಚಿ ಪರಾರಿಯಾಗಿದ್ದಾರೆ.

ಪಿಸ್ತೂಲು, ಮಾರಕಾಸ್ತ್ರಗಳೊಂದಿಗೆ ಮುಖಕ್ಕೆ ಮುಸುಕು ಧರಿಸಿ ಬಂದಿದ್ದ ದರೋಡೆಕೋರರು ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿಯನ್ನು ಬೆದರಿಸಿ ಕಟ್ಟಿಹಾಕಿ ದರೋಡೆ ನಡೆಸಿದ್ದಾರೆ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಮತ್ತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular