ರಾಯಪುರ: ಸಶಸ್ತ್ರ ಹೋರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಮಾವೋವಾದಿಗಳು ಘೋಷಿಸಿದ್ದು, ಸರ್ಕಾರ ‘ಕದನ ವಿರಾಮ’ ಘೋಷಿಸುವಂತೆ ಕೋರಿದ್ದಾರೆ.
ನಿಷೇಧಿತ ಕಮ್ಯುನಿಸ್ಟ್ ಪಕ್ಷ ಆಫ್ ಇಂಡಿಯಾ(ಮಾವೋವಾದಿ), ಶಾಂತಿ ಮಾತುಕತೆಗೆ ಅನುಕೂಲವಾಗುವಂತೆ ತನ್ನ ಸಶಸ್ತ್ರ ಹೋರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಆದರೆ ಪ್ರಕ್ರಿಯೆಯನ್ನು ಪ್ರಾರಂಭಿಸಲು ಒಂದು ತಿಂಗಳ ‘ಕದನ ವಿರಾಮ’ ಘೋಷಿಸಲು ಮತ್ತು ಭದ್ರತಾ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲು ಸರ್ಕಾರವನ್ನು ಕೇಳಿದೆ.
ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಛತ್ತೀಸ್ ಗಢ ಸರ್ಕಾರ, ಮಂಗಳವಾರ ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದೆ ಎಂದು ಹೇಳಿದೆ.
ಮಾವೋವಾದಿಗಳು ಹೊರಡಿಸಿದ್ದಾರೆ ಎಂದು ಹೇಳಲಾದ ಹೇಳಿಕೆಯಲ್ಲಿ, ಬಂಡುಕೋರರು ಈ ವಿಷಯದ ಬಗ್ಗೆ ತಮ್ಮ ನಿರ್ಧಾರವನ್ನು ಇಂಟರ್ನೆಟ್ ಮತ್ತು ರೇಡಿಯೋ ಸೇರಿದಂತೆ ಸರ್ಕಾರಿ ಸುದ್ದಿ ಮಾಧ್ಯಮಗಳ ಮೂಲಕ ಹಂಚಿಕೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.