BIG NEWS : ‘ಕೃಷ್ಣಾ ಮೇಲ್ದಂಡೆ’ ಯೋಜನೆ 3 ನೇ ಹಂತ : ರಾಜ್ಯ ಸರ್ಕಾರದಿಂದ ಸಂತ್ರಸ್ತ ರೈತರಿಗೆ ಭರ್ಜರಿ ಪರಿಹಾರ ಘೋಷಣೆ.!

ಬೆಂಗಳೂರು : ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ಅನುಷ್ಠಾನಕ್ಕೆ 1,33,867 ಎಕರೆ ಜಮೀನು ಬೇಕಾಗಲಿದೆ. ಇದರಲ್ಲಿ 75,563 ಎಕರೆ ಮುಳುಗಡೆಯಾಗಲಿದ್ದರೆ, 51,837 ಎಕರೆ ಕಾಲುವೆ ನಿರ್ಮಾಣಕ್ಕೆ ಬೇಕಾಗಿದೆ. ರೈತರ ಪುನರ್ವಸತಿ ಹಾಗೂ ಪುನರ್ ವ್ಯವಸ್ಥೆ ಕಾರ್ಯಗಳಿಗೆ 6,469 ಎಕರೆಗಳ ಅವಶ್ಯಕತೆಯಿದೆ. ಇದರಿಂದ ಸುಮಾರು 20 ಗ್ರಾಮಗಳು, ಕೆಲವು ಪಟ್ಟಣದ ವಾರ್ಡ್ ಗಳು ಮುಳುಗಡೆಯಾಗುತ್ತಿದ್ದು, ಒಟ್ಟು 1,33,867 ಎಕರೆಗೆ ಭೂಸ್ವಾಧೀನ ಪರಿಹಾರ ನೀಡುವ ಐತಿಹಾಸಿಕ ತೀರ್ಮಾನವನ್ನು ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ಅನುಷ್ಠಾನಕ್ಕೆ 1,33,867 ಎಕರೆ ಜಮೀನು ಬೇಕಾಗಲಿದೆ. ಇದರಲ್ಲಿ 75,563 ಎಕರೆ ಮುಳುಗಡೆಯಾಗಲಿದ್ದರೆ, 51,837 ಎಕರೆ ಕಾಲುವೆ ನಿರ್ಮಾಣಕ್ಕೆ ಬೇಕಾಗಿದೆ. ರೈತರ ಪುನರ್ವಸತಿ ಹಾಗೂ ಪುನರ್ ವ್ಯವಸ್ಥೆ ಕಾರ್ಯಗಳಿಗೆ 6,469 ಎಕರೆಗಳ ಅವಶ್ಯಕತೆಯಿದೆ. ಇದರಿಂದ ಸುಮಾರು 20 ಗ್ರಾಮಗಳು, ಕೆಲವು ಪಟ್ಟಣದ ವಾರ್ಡ್ ಗಳು ಮುಳುಗಡೆಯಾಗುತ್ತಿದ್ದು, ಒಟ್ಟು 1,33,867 ಎಕರೆಗೆ ಭೂಸ್ವಾಧೀನ ಪರಿಹಾರ ನೀಡುವ ಐತಿಹಾಸಿಕ ತೀರ್ಮಾನವನ್ನು ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಈ ಯೋಜನೆಗಾಗಿ ಪ್ರತಿವರ್ಷ ಸುಮಾರು 15 ರಿಂದ 20 ಸಾವಿರ ಕೋಟಿ ರೂ.ಗಳನ್ನು ವೆಚ್ಚ ಮಾಡಲು ನಾವು ಸಿದ್ಧರಿದ್ದು. ಒಟ್ಟಾರೆ ಈ ಯೋಜನೆಗೆ ಸುಮಾರು 70 ಸಾವಿರ ಕೋಟಿ ರೂ. ಗಳು ವೆಚ್ಚವಾಗಲಿದೆ ಎಂದು ಸಿಎಂ ಹೇಳಿದ್ದಾರೆ.

ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸಿದ ಬಳಿಕ ಹಿನ್ನೀರಿನಿಂದ ಸುಮಾರು 75,000 ಎಕರೆಗೂ ಹೆಚ್ಚು ಜಮೀನು ಮುಳುಗಡೆಯಾಗುವ ಸಂಭವವಿದೆ. ಈ ರೈತರಿಗೆ ನ್ಯಾಯಯುತ ಪರಿಹಾರ ನೀಡುವ ಸಂಬಂಧ ಕೂಡ ರಾಜ್ಯ ಸರ್ಕಾರ ನಿರ್ಣಯ ಕೈಗೊಂಡಿದೆ. ಈ ಯೋಜನೆಯಿಂದ 5.94 ಲಕ್ಷ ಹೆಕ್ಟೇರ್ (ಸುಮಾರು 14 ರಿಂದ 15 ಲಕ್ಷ ಎಕರೆ) ಭೂಮಿಗೆ ನೀರಾವರಿ ಸೌಲಭ್ಯ ದೊರಕಲಿದೆ. ಇದು ಮಳೆಯಾಶ್ರಿತ ಕೃಷಿಯನ್ನು ನಂಬಿ ಸಂಕಷ್ಟದಲ್ಲಿ ಬದುಕು ಸಾಗಿಸುತ್ತಿದ್ದ ಸಾವಿರಾರು ರೈತ ಕುಟುಂಬಗಳ ಪಾಲಿಗೆ ವರದಾನವಾಗಲಿದೆ.

2023ರಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪರಿಹಾರದ ಮೊತ್ತ ಕಡಿಮೆಯಿದ್ದುದ್ದರಿಂದ ಯಾವ ರೈತರೂ ಭೂಮಿ ನೀಡಲು ಒಪ್ಪಲಿಲ್ಲ ಹಾಗೂ ಯೋಜನೆಗೆ ಚಾಲನೆಯೂ ದೊರೆಯದೇ ನೆನೆಗುದಿಗೆ ಬಿದ್ದಿತ್ತು. ಈ ಭಾಗದ ರೈತರ ನಿರೀಕ್ಷೆಯಂತೆ ನೀರಾವರಿ ಜಮೀನಿಗೆ ಎಕರೆಯೊಂದಕ್ಕೆ 40 ಲಕ್ಷ ರೂ, ಖುಷ್ಕಿ / ಒಣಭೂಮಿಗೆ ಎಕರೆಯೊಂದಕ್ಕೆ 30 ಲಕ್ಷ ಪರಿಹಾರವನ್ನು ನೀಡಬೇಕೆಂದು ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದ್ದು, ರಾಜ್ಯ ಸರ್ಕಾರವು ಅನ್ನದಾತರ ಹಿತಕಾಯುವ ತನ್ನ ಬದ್ಧತೆ ಮೆರೆದಿದೆ.
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಮತ್ತು ನ್ಯಾಯಾಧೀಕರಣದ ತೀರ್ಪಿನಂತೆ ಆಲಮಟ್ಟಿ ಜಲಾಶಯದ ಎತ್ತರವನ್ನು 519.6 ಮೀ. ನಿಂದ 524.256 ಮೀ. ಗೆ ಏರಿಸಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಈವರೆಗೆ ಸಮುದ್ರ ಸೇರಿ ವ್ಯರ್ಥವಾಗುತ್ತಿದ್ದ ನೀರನ್ನು ಸದ್ಬಳಕೆ ಮಾಡಿಕೊಂಡು, ಲಕ್ಷಾಂತರ ರೈತರ ಬದುಕು ಹಸನಾಗಿಸುವ ನಿಟ್ಟಿನಲ್ಲಿ ಇದೊಂದು ಐತಿಹಾಸಿಕ ನಿರ್ಣಯವಾಗಿದೆ.

ನಮ್ಮ ಸರ್ಕಾರ ಎಂದೆಂದಿಗೂ ನುಡಿದಂತೆ ನಡೆಯುತ್ತದೆ ಎಂಬುದಕ್ಕೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವ ತೀರ್ಮಾನ ಮತ್ತೊಂದು ನಿದರ್ಶನ. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ತ್ವರಿತ ಅನುಷ್ಠಾನಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡಿದ್ದು, ಈ ದಿಸೆಯಲ್ಲಿ ರಾಜ್ಯಕ್ಕೆ ಸಮೃದ್ಧಿ ತರಬಲ್ಲ ಐತಿಹಾಸಿಕ ತೀರ್ಮಾನವನ್ನು ನಾವು ಕೈಗೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read