ಚಿತ್ರದುರ್ಗ : ಚಿತ್ರದುರ್ಗದಲ್ಲಿ ಘೋರ ದುರಂತ ಸಂಭವಿಸಿದ್ದು, ಆಕಸ್ಮಿಕವಾಗಿ ಕಾರು ಹೊತ್ತಿ ಉರಿದು ಯುವಕ ಸಜೀವ ದಹನಗೊಂಡಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಅರಳೀಕಟ್ಟೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ಮೃತರನ್ನು ಸಿದ್ದೇಶ್ವರ್ (35) ಎಂದು ಗುರುತಿಸಲಾಗಿದೆ. ಟಾಟಾ ನೆಕ್ಸಾನ್ ಕಾರು ಹೊತ್ತಿ ಉರಿದಿದೆ. ಅದರೊಳಗೆ ಸಿಲುಕಿ ಸಿದ್ದೇಶ್ವರ್ ಸಜೀವವಾಗಿ ದಹನಗೊಂಡಿದ್ದಾರೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.