ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಂಗ್ಲಗುಡ್ಡದಲ್ಲಿ ಮಹಜರು ನಡೆಸಲು ಎಸ್ ಐಟಿಗೆ ಅರಣ್ಯ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.
ಈ ಹಿನ್ನೆಲೆಯಲ್ಲಿ ಧರ್ಮಸ್ಥಳದ ನೇತ್ರಾವತಿ ನದಿ ತೀರದ ಬಂಗ್ಲಗುಡ್ದ ಪ್ರದೇಶದಲ್ಲಿ ವಿಠಲಗೌಡ ಬುರುಡೆ ತಂದಿರುವ ಜಾಗದಲ್ಲಿ ಎಸ್ ಐಟಿ ಅಧಿಕಾರಿಗಳು ಇಂದು ಮಹಜರು ನಡೆಸಲಿದ್ದಾರೆ.
ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮಾ ನೇತೃತ್ವದಲ್ಲಿ ಮಹಜರು ಪ್ರಕ್ರಿಯೆ ನಡೆಯಲಿದೆ. ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ಸೋಕೋ ಟೀಂ, ಕಂದಾಯ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಜರಿರುವಂತೆ ಸೂಚನೆ ನೀಡಲಾಗಿದೆ. ಬಂಗ್ಲಗುಡ್ಡದಲ್ಲಿ ಭೂಮಿ ಅಗೆಯಲಾಗುವುದಿಲ್ಲ, ಬದಲಿಗೆ ಮಹಜರು ನಡೆಯಲಿದೆ ಎಂದು ತಿಳಿದುಬಂದಿದೆ.