GOOD NEWS : ‘ಕಲ್ಯಾಣ ಕರ್ನಾಟಕ’ ಭಾಗಕ್ಕೆ ‘CM ಸಿದ್ದರಾಮಯ್ಯ’ ಬಂಪರ್ ಗಿಫ್ಟ್ : 5267 ಶಿಕ್ಷಕರ ಹುದ್ದೆ ಭರ್ತಿ, ಹಲವು ಯೋಜನೆ ಘೋಷಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಜನತೆಗೆ ಸಿಎಂ ಸಿದ್ದರಾಮಯ್ಯ ‘ಬಂಪರ್ ಗಿಫ್ಟ್’ ನೀಡಿದ್ದು, , ಹಲವು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

7 ಜಿಲ್ಲೆಗಳಲ್ಲಿ 204 ಕೋಟಿ ರೂ ವೆಚ್ಚದಲ್ಲಿ ವಸತಿ ಶಾಲೆಗಳ ನಿರ್ಮಾಣ ಮಾಡಲಾಗುತ್ತದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗೆ ತರಬೇತಿ ಕೇಂದ್ರ, ಕಲಬುರಗಿಯಲ್ಲಿ 100 ಕೋಟಿ ವೆಚ್ಚದಲ್ಲಿ ನಿಮ್ಹಾನ್ಸ್ ಆಸ್ಪತ್ರೆ, ಹಾಗೂ ಮಕ್ಕಳ ಆಸ್ಪತ್ರೆ ನಿರ್ಮಿಸಲು 220 ಕೋಟಿ ರೂ ಅನುದಾನ ನೀಡಲಾಗುವುದು ಎಂದರು.

ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಕುಸಿತ ಕಂಡ ಹಿನ್ನೆಲೆಯಲ್ಲಿ ಖಾಲಿ ಇರುವ 5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಸಮಾಜ ಕಲ್ಯಾಣ, ಬಿಸಿಎಂ ಇಲಾಖೆ ಹಾಗೂ ಅಲ್ಪಸಂಖ್ಯಾತ ಇಲಾಖೆ ವತಿಯಿಂದ ಹೊಸದಾಗಿ ವಸತಿ ಶಾಲೆ ಹಾಗೂ ವಸತಿ ನಿಲಯಗಳನ್ನು ನಿರ್ಮಿಸಲಾಗುತ್ತಿದೆ ಎಂದರು.ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ರಚಿಸಲು ಆದೇಶ ಹೊರಡಿಸಲಾಗಿದೆ. ಒಂದು ವಾರದಲ್ಲಿ ಹುದ್ದೆ ಸಹಿತ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗುವುದು ಎಂದರು.

ಹೈದ್ರಾಬಾದ್ ನಿಜಾಮರ ಆಳ್ವಿಕೆಗೊಳಪಟ್ಟಿದ್ದ ಕಲ್ಯಾಣ ಕರ್ನಾಟಕದ ಹಲವು ಜಿಲ್ಲೆಗಳು ಸ್ವತಂತ್ರಗೊಂಡು, ಭಾರತ ಒಕ್ಕೂಟ ವ್ಯವಸ್ಥೆಯನ್ನು ಕೂಡಿಕೊಂಡ ಈ ದಿನ ಕನ್ನಡಿಗರ ಪಾಲಿಗೆ ಅತ್ಯಂತ ಸ್ಮರಣೀಯ ದಿನ. ಅಖಂಡ ಭಾರತ ನಿರ್ಮಾಣಕ್ಕಾಗಿ ತ್ಯಾಗ, ಬಲಿದಾನಗೈದ ಎಲ್ಲಾ ಮಹಾಚೇತನಗಳನ್ನು ಈದಿನ ಗೌರವದಿಂದ ಸ್ಮರಿಸಿ, ನಮಿಸುತ್ತೇನೆ ಎಂದಿದ್ದಾರೆ.

ಪುಷ್ಪ ನಮನ
ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕಲಬುರಗಿಯಲ್ಲಿ ಇಂದು ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಹೈದ್ರಾಬಾದ್ ನಿಜಾಮರ ಆಳ್ವಿಕೆಯಿಂದ ಭಾರತದ ಒಕ್ಕೂಟಕ್ಕೆ ಸೇರ್ಪಡೆಯಾದ ಇದು ನಮ್ಮ ಪಾಲಿಗೆ ಐತಿಹಾಸಿಕ ದಿನ. ಪ್ರಾಕೃತಿಕ ಅಸಮತೋಲನದಿಂದಾಗಿ ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read