ಹೈದರಾಬಾದ್: ಕಿಸ್ಮತ್ ಪುರ ಸೇತುವೆ ಕೆಳಗೆ ಮೂಟೆಯೊಂದರಲ್ಲಿ ಮಹಿಳೆಯಬ್ಬರ ನಗ್ನ ಶವ ಪತ್ತೆಯಾಗಿರುವ ಘಟನೆ ಹೈದರಾಬಾದ್ ನ ರಾಜೇಂದ್ರ ನಗರದಲ್ಲಿ ನಡೆದಿದೆ.
ಕಿಸ್ಮತ್ ಪುರ ಸೇತುವೆ ಕೆಳಗೆ ಪ್ಲಾಸ್ಟಿಕ್ ಚೀಲದಲ್ಲಿ ಮಹಿಳೆ ಶವಪತ್ತೆಯಾಗಿದ್ದು, ಮೂರು ದಿನಗಳ ಹಿಂದೆ ಮಹಿಳೆಯನ್ನು ಕೊಲೆ ಮಾಡಿ ಮೂಟೆಕಟ್ಟಿ ಬಿಸಾಕಿರುವ ಶಂಕೆ ವ್ಯಕ್ತವಾಗಿದೆ.
ಸುಮಾರು 25-30 ವರ್ಷ ವಯಸ್ಸಿನ ಮಹಿಳೆಯ ಶವ ಇದಾಗಿದೆ. ಲೈಂಗಿಕ ದೌರ್ಜನ್ಯವೆಸಗಿ ಬಳಿಕ ಕೊಲೆ ಮಾಡಿರುವ ಶಂಕೆ ಇದೆ. ಘಟನ ಅಸ್ಥಳಕ್ಕೆ ರಾಜೇಂದ್ರ ನಗರ ಪೊಲೀಸರು ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಸಿಸಿ ಕ್ಯಾಮರಾ ಪರಿಶೀಲನೆ ನಡೆಸಲಾಗುತ್ತಿದೆ. ಮೃತ ಮಹಿಳೆಯ ಗುರುತು ಪತ್ತೆಗಾಗಿಯೂ ತನಿಖೆ ನಡೆಸಲಾಗುತ್ತಿದೆ.