ವಿಜಯನಗರ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸರ್ಕಾರಿ ಶಾಲೆಯ ಕೊಠಡಿ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ನಡೆದಿದೆ.
ಶಾಲೆಯ ನಲಿಕಲಿ ಕೊಠಡಿಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಮಕ್ಕಳು ಕೊಠಡಿಯ ಹೊರಗಿದ್ದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ಕೊಠಡಿಯ ಬಾಗಿಲು ತೆರೆಯುತ್ತಿದ್ದಂತೆಯೇ ಮೇಲ್ಛಾವಣಿ ಪದರು ಟೇಬಲ್ ಗಳ ಮೇಲೆ, ಕುರ್ಚಿ ಮೇಲೆ ಬಿದ್ದಿದೆ.
ಕೊಠಡಿ ಮೇಲ್ಛಾವಣಿ ಶಿಥಿಲಾವಸ್ಥೆಯಲ್ಲಿದ್ದರೂ ಯಾವುದೇ ದುರಸ್ತಿ ಕಾರ್ಯ ನಡೆದಿರಲಿಲ್ಲ. ಇದರಿಂದಾಗಿ ಅವಘಡ ಸಂಭವಿಸಿದೆ. ಇನ್ನಾದರೂ ಶಾಲೆಯಲ್ಲಿ ದುಸ್ತಿಕಾರ್ಯ ನಡೆಸುವಮ್ತೆ ಪೋಷಕರು ಒತ್ತಾಯಿಸಿದ್ದಾರೆ