ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್, ಜೈಲಿನಲ್ಲಿ ಕೆಲ ಸೌಲಭ್ಯ ಕಲ್ಪಿಸುವಂತೆ ಸಲ್ಲಿಸಿದ್ದ ಅರ್ಜಿ ವಿಚಾರ್ಣೆಯನ್ನು ನ್ಯಾಯಾಲಯ ಮುಂದೂಡಿದೆ.
ಜೈಲಿನಲ್ಲಿ ತನ ಹಾಸಿಗೆ, ತಲೆದಿಂಬು ಒದಗಿಸುವಂತೆ ಈ ಹಿಂದೆ ನಟ ದರ್ಶನ್, ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದನ್ನು ಪುರಸ್ಕರಿಸಿದ್ದ ನ್ಯಾಯಾಲಯ ದರ್ಶನ್ ಗೆ ಹಾಸಿಗೆ, ತಲೆದಿಂಬು ನೀಡುವಂತೆ ಆದೇಶ ನೀಡಿತ್ತು. ಆದರೆ ಕೋರ್ಟ್ ಆದೇಶ ನೀಡಿದರೂ ಜೈಲಾಧಿಕಾರಿಗಳು ಈವರೆಗೆ ದರ್ಶನ್ ಗೆ ಯಾವುದೇ ಹಾಸಿಗೆ, ತಲೆದಿಂಬು ಮೊದಲಾದ ವ್ಯವಸ್ಥೆ ಮಾಡಿಲ್ಲ. ಇದರಿಂದ ತೊಂದರೆ ಅನುಭವಿಸುತ್ತಿರುವ ದರ್ಶನ್ ಮತ್ತೆ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಜೈಲಧಿಕಾರಿಗಳು ಕೋರ್ಟ್ ಆದೇಶ ಪಾಲನೆ ಮಾಡಿಲ್ಲ ಎಂದೂ ದೂರು ನೀಡಿದ್ದಾರೆ.
ದರ್ಶನ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್, ವಾದ-ಪ್ರತಿವಾದ ಆಲಿಸಿದ್ದು, ಅರ್ಜಿ ಕುರುತ ಆದೇಶವನ್ನು ಸೆಪ್ಟೆಂಬರ್ 19ಕ್ಕೆ ನಿಗದಿ ಮಾಡಿದೆ.