ಬೆಂಗಳೂರು: ಇತ್ತೀಚೆಗೆ ನಿಧನರಾಗಿರುವ ಹಿರಿಯ ನಟಿ ದಿ.ಬಿ.ಸರೋಜಾದೇವಿ ಹೆಸರಿನಲ್ಲಿ ರಾಜ್ಯ ಸರ್ಕಾರ ‘ಅಭಿನಯ ಸರಸ್ವತಿ’ ಪ್ರಶಸ್ತಿ ಘೋಷಿಸಿದೆ.
ನಟಿ ಬಿ.ಸರೋಜಾದೇವಿ ಪಂಚಭಾಷೆ ತಾರೆಯಾಗಿದ್ದರು. ಭಾರತೀಯ ಹಾಗೂ ಕನ್ನಡ ಚಿತ್ರರಂಗಕ್ಕೆ ಅವರು ನೀಡಿರುವ ಕೊಡುಗೆ ಅಪಾರ. ಅದನ್ನು ಪರಿಗಣಿಸಿ ಅವರು ಪದೆದಿದ್ದ ಅಭಿನಯ ಸರಸ್ವತಿ ಬಿರುದಿನ ಹೆಸರಲ್ಲಿ ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಅವಿಸ್ಮರಣೀಯ ಸೇವೆ ಸಲ್ಲಿಸಿದ ಮಹಿಳೆಯರಿಗೆ ಜೀವಮಾನ ಸಾಧನೆ ಪ್ರಶಸ್ತಿಯಾಗಿ ಅಭಿನಯ ಸರಸ್ವತಿ ಪ್ರಶಸ್ತಿ ನೀಡಲಾಗುವುದು. ಪ್ರಸ್ತುತ ಜಾರಿಯಲ್ಲಿರುವ ಕನ್ನಡ ಚಲನಚಿತ್ರ ನೀತಿ-2011ರಲ್ಲಿನ ವಾರ್ಷಿಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಪಟ್ಟಿ ಅನುಬಂಧ-1ರಡಿ ಜಾರಿಗೆ ತರಗಿದೆ.
ಈ ಪ್ರಶಸ್ತಿಯಡಿಯಲ್ಲಿ 1 ಲಕ್ಷ ನಗದು ಹಾಗೂ 100 ಗ್ರಾಂ ಬೆಳ್ಳಿ ಪದಕ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಪ್ರಕಟಿಸಿದೆ,.