ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಇನ್ಮುಂದೆ ಇವಿಎಂಗಳಲ್ಲಿ ಅಭ್ಯರ್ಥಿಗಳ ಬಣ್ಣದ ಭಾವಚಿತ್ರ ಇರಲಿದೆ ಎಂದು ತಿಳಿಸಿದೆ.
ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸಲು ಮತ್ತು ಮತದಾರರಿಗೆ ಅನುಕೂಲ ಮಾಡಿಕೊಡಲು ಹೊಸ ಗೈಡ್ ಲೈನ್ ಪ್ರಕಟಿಸಲಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿ ಈ ಪ್ರಯೋಗ ನಡೆಯಲಿದೆ.
ಇದೇ ವರ್ಷ ಬಿಹಾರ ಚುನಾವಣೆ ನಡೆಯಲಿದ್ದು, ಈ ವೇಳೆ ಇವಿಎಂಗಳಲ್ಲಿ ಅಭ್ಯರ್ಥಿಗಳ ಬಣ್ಣದ ಭಾವಚಿತ್ರ ಪ್ರಯೋಗ ನಡೆಯಲಿದೆ.