ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ನಮ್ಮ ಸರ್ಕಾರ ಇದುವರೆಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗಾಗಿ ವಿನಿಯೋಗಿಸಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಶಕ್ತಿ ಯೋಜನೆಯಡಿ 77.6 ಕೋಟಿ ಬಾರಿ ಮಹಿಳೆಯರು ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದು, ಇದಕ್ಕಾಗಿ 2,100 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ. ಕಳೆದ 2 ವರ್ಷಗಳಲ್ಲಿ ಕೆಕೆಆರ್ಟಿಸಿಗೆ ಹೊಸದಾಗಿ 937 ಹೊಸ ಬಸ್ಗಳನ್ನು ಖರೀದಿಸಲಾಗಿದ್ದು, 1,873 ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗಿದೆ.
ಗೃಹಜ್ಯೋತಿ ಯೋಜನೆಯಡಿ 21.42 ಲಕ್ಷ ಗ್ರಾಹಕರು ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿದ್ದು, ಇದಕ್ಕಾಗಿ 2,328 ಕೋಟಿ ರೂ ವಿನಿಯೋಗಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ 24.78 ಲಕ್ಷ ಕುಟುಂಬಗಳ ಯಜಮಾನಿ ಮಹಿಳೆಯರಿಗೆ ತಲಾ 2,000 ರೂ.ಗಳಂತೆ ಒಟ್ಟು 9,650 ಕೋಟಿ ರೂ.ಗಳನ್ನು ವಿತರಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗಾಗಿ 3,200 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತವನ್ನು ವಿನಿಯೋಗಿಸಲಾಗಿದೆ. ಯುವನಿಧಿ ಯೋಜನೆಯಡಿ 5.75 ಲಕ್ಷ ನಿರುದ್ಯೋಗಿ ಯುವಕ-ಯುವತಿಯರಿಗೆ ಒಟ್ಟು 172 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.