ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್.ಎಸ್.ಎಸ್.) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಖಾಸಗಿ ದೂರು ವಜಾಗೊಳಿಸಲಾಗಿದೆ.
ಎನ್. ಕಿರಣ್ ಎಂಬುವವರು ದಾಖಲಿಸಿದ್ದ ಖಾಸಗಿ ದೂರು ವಜಾಗೊಳಿಸಿ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಆರ್.ಎಸ್.ಎಸ್. ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಿದ್ಧರಾಮಯ್ಯ ಅವರ ವಿರುದ್ಧ ಕಿರಣ್ ದೂರು ದಾಖಲಿಸಿದ್ದರು.