ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಕೈಗೊಳ್ಳುವ ಸಮೀಕ್ಷಾ ಕಾರ್ಯಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶಾ ಕಾರ್ಯಕರ್ತೆಯರ ಸೇವೆಯನ್ನು ಪಡೆಯುವ ಕುರಿತ ಸರ್ಕಾರದ ಆದೇಶ ಹೊರಡಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ 2 20:22-09-2025 ರಿಂದ 07-10-20250 ವರೆಗೆ ಕೈಗೊಳ್ಳಲಾಗುವ ಸಮೀಕ್ಷೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯದಲ್ಲಿ ಭಾಗವಹಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸಂಬಂಧಿಸಿದ ಆಶಾ ಕಾರ್ಯಕರ್ತೆಯರಿಗೆ ನಿರ್ದೇಶನ ನೀಡಲು ಸರ್ಕಾರದ ಅನುಮೋದನೆ ನೀಡಿ ಆದೇಶಿಸಿದೆ.
ಮುಂದುವರೆದು, ಆರೋಗ್ಯ ಇಲಾಖೆಯಿಂದ ನಿಯೋಜಿಸಲಾದ ಆಶಾ ಕಾರ್ಯಕರ್ತೆಯರು ಶೇ.90% ರಷ್ಟು ಮನೆಗಳಿಗೆ ಭೇಟಿ ನೀಡಿ ಜಾಗೃತಿ ಅಭಿಯಾನ ಆ್ಯಪ್ ಮೂಲಕ ಯು.ಹೆಚ್.ಐ.ಡಿ. ನಂಬರ್ ಹಾಗೂ ಮೊಬೈಲ್ ದೂರವಾಣಿ ಸಂಖ್ಯೆಗಳನ್ನು ಸಂಗ್ರಹಿಸುವ ಪ್ರತಿ ಆಶಾ ಕಾರ್ಯಕರ್ತೆಯರಿಗೆ ರೂ.2000/-ಗಳ ಗೌರವಧನವನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಲೆಕ್ಕ ಶೀರ್ಷಿಕೆಯಡಿ ಒದಗಿಸುವ ಅನುದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮೂಲಕ ಪಾವತಿಸಲಾಗುವುದು.
ಈ ಆದೇಶವನ್ನು ಮುಖ್ಯಮಂತ್ರಿಯವರ ಅನುಮೋದನೆ ಮೇರೆಗೆ ಹೊರಡಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ-1 ತಿಳಿಸಿದ್ದಾರೆ.
