ಬೆಂಗಳೂರು: ಅಂಗವಿಕಲರ ನಕಲಿ ಪ್ರಮಾಣ ಪತ್ರ ನೀಡಿದ ಆರೋಗ್ಯ ಇಲಾಖೆ ಅಧಿಕಾರಿ ಡಾ. ಸುಧಾಕರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಎಂಬಿಬಿಎಸ್ ಸೀಟ್ ಗಾಗಿ ನಕಲಿ ವೈದ್ಯಕೀಯ ಪ್ರಮಾಣ ಪತ್ರ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕು ಮಂಗಳೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ಡಾ. ಸುಧಾಕರ್ ಬಂಧಿತರಾಗಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂ ಠಾಣೆ ಪೊಲೀಸರು ಸುಧಾಕರ್ ಅವರನ್ನು ಬಂಧಿಸಿದ್ದಾರೆ. ಸುಮಾರು 21 ಜನರಿಗೆ ಸುಧಾಕರ್ ನಕಲಿ ಪ್ರಮಾಣ ಪತ್ರ ನೀಡಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ಪೊಲೀಸರು ಸುಧಾಕರ್ ಅವರನ್ನು ಬಂಧಿಸಿದ್ದಾರೆ.