ಬೆಂಗಳೂರು: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬೆಂಗಳೂರಿನಲ್ಲಿ ಯೋಗ ಗುರು ಬಂಧಿಸಲಾಗಿದೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಯೋಗ ಗುರು ನಿರಂಜನ ಮೂರ್ತಿಯನ್ನು ಬಂಧಿಸಲಾಗಿದೆ. ಯೋಗ ತರಬೇತಿ ನಡೆಸುತ್ತಿದ್ದ ಆರೋಪಿ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಆರೋಪಿ ಈ ಹಿಂದೆ 7-8 ಬಾಲಕಿಯರು, ಯುವತಿಯರನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ದೂರಿನ ಅನ್ವಯ ಪೋಕ್ಸೋ ಕೇಸ್ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗ ಗುರು ನಿರಂಜನ ಮೂರ್ತಿ ಬಂಧಿಸಲಾಗಿದೆ. ರಾಜರಾಜೇಶ್ವರಿ ನಗರ ಠಾಣೆ ಪೋಲೀಸರು ಆರೋಪಿ ಬಂಧಿಸಿ ತನಿಖೆ ಮುಂದುವರಿಸಿದ್ದಾರೆ ಎನ್ನಲಾಗಿದೆ.