HomeLatest NewsRAIN ALERT: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಸೆ.20ರವರೆಗೂ ಮುಂದುವರೆಯಲಿದೆ ಮಳೆ...

RAIN ALERT: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಸೆ.20ರವರೆಗೂ ಮುಂದುವರೆಯಲಿದೆ ಮಳೆ ಅಬ್ಬರ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಚುರುಕಾಗಿದ್ದು, 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 20ರವರೆಗೂ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕಲಬುರಗಿ, ಬೀದರ್, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚು ,ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ವಿಜಯನಗರ, ಮೈಸೂರು, ಮಂಡ್ಯ, ಹಾಸನ, ಚಿತ್ರದುರ್ಗ, ಚಾಮರಾಜನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular