ಬೆಂಗಳೂರು: ನಟ ಕಿಚ್ಚ ಸುದೀಪ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇದಿಗಳು ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ್ದು, ಅಖಿಲ ಕರ್ನಾಟಕ ಕಿಚ್ಚ ಸುದೀಪ್ ಸೇನಾ ಸಮಿತಿ ಸಿಡಿದೆದ್ದಿದೆ.
ಫೇಕ್ ಅಕೌಂಟ್ ಕ್ರಿಯೆಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಕಿಚ್ಚಾ ಸುದೀಪ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕುವ ಮೂಲಕ ನಟನ ಘನತೆಗೆ ಧಕ್ಕೆತರಲಾಗುತ್ತಿದೆ. ಈ ಮೂಲಕ ಸ್ಟಾರ್ ವಾರ್ ಮಾಡಿಸುವ ಹುನ್ನಾರ ನಡೆದಿದೆ. ಫೇಕ್ ಅಕೌಂಟ್ ಹೋಲ್ಡರ್ ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಿಚ್ಚ ಸುದೀಪ್ ಸೇನಾ ಸಮತಿಯ ನವೀನ್ ಗೌಡ ಒತ್ತಾಯಿಸಿದ್ದಾರೆ.
ಅಖಿಲ ಕರ್ನಾಟಕ ಕಿಚ್ಚ ಸುದೀಪ್ ಸೇನಾ ಸಮಿತಿ ಬೆಂಗಳೂರು ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ನೀಡಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.