ದಾವಣಗೆರೆ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಮಾಯಗೊಂಡನಹಳ್ಳಿಯಲ್ಲಿ ನಡೆದಿದೆ.
ಹಿಂಡಸಕಟ್ಟೆಯ ತಿಪ್ಪಣ್ಣ (56), ದಿಡ್ಡದಹಳ್ಳಿಯ ರಮೇಶ್ (56) ಮೃತ ದುರ್ದೈವಿಗಳು. ಅಪಘಾತದಲ್ಲಿ ಸುಚಿತ್ರಾ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮಾಯಗೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.