ಬೆಂಗಳೂರು : ನಟ ಉಪೇಂದ್ರ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ ಸಿಕ್ಕಿದ್ದು, ಉಪ್ಪಿ ಹೊಸ ಚಿತ್ರ ಘೋಷಣೆ ಆಗಿದೆ.
ಹೌದು, ಓಂ ಪ್ರಕಾಶ್ ರಾವ್ ನಿರ್ದೇಶನದ 50 ನೇ ಚಿತ್ರ ಗೆರಿಲ್ಲಾ ವಾರ್ ಚಿತ್ರದಲ್ಲಿ ನಟ ಉಪೇಂದ್ರ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಉಪೇಂದ್ರ ಸೈನಿಕನಾಗಿ ಪಾತ್ರ ಮಾಡುತ್ತಿದ್ದು, ಅವರಿಗೆ ನಾಯಕಿಯಾಗಿ ನಿಮಿತಾ ರತ್ನಾಕರ್ ಕಾಣಿಸಿಕೊಂಡಿದ್ದಾರೆ.
ಸಿನಿಮಾದ ಬಗ್ಗೆ ಅಭಿಮಾನಿಗಳಲ್ಲಿ ಸಿಕ್ಕಾಪಟ್ಟೆ ಕ್ಯುರಿಯಾಸಿಟಿ ಇದೆ. ಸದ್ಯ ಗೆರಿಲ್ಲಾ ವಾರ್ ಸಿನಿಮಾದ ಪೋಸ್ಟರ್ ರಿಲೀಸ್ ಆಗಿದ್ದು, ಬಂದೂಕು ಹಿಡಿದು ಉಪೇಂದ್ರ ಕಾಣಿಸಿಕೊಂಡಿದ್ದಾರೆ. ಇದೊಂದು ಪಕ್ಕಾ ಆ್ಯಕ್ಷನ್ ಸಿನಿಮಾವಾಗಿದ್ದು, ಸಿನಿಮಾದ ಬಗ್ಗೆ ನಿರೀಕ್ಷೆ ಮೂಡಿದೆ.
You Might Also Like
TAGGED:ಉಪೇಂದ್ರ