HomeLatest Newsನಾಡಪ್ರಭು 'ಕೆಂಪೇಗೌಡ' ಕಟ್ಟಿದ ಬೆಂಗಳೂರು 'ಗುಂಡಿಯೂರು' ಆಗಿ ಕುಖ್ಯಾತಿ ಪಡೆದಿರುವುದು ದುರ್ದೈವ : H.D ಕುಮಾರಸ್ವಾಮಿ...

ನಾಡಪ್ರಭು ‘ಕೆಂಪೇಗೌಡ’ ಕಟ್ಟಿದ ಬೆಂಗಳೂರು ‘ಗುಂಡಿಯೂರು’ ಆಗಿ ಕುಖ್ಯಾತಿ ಪಡೆದಿರುವುದು ದುರ್ದೈವ : H.D ಕುಮಾರಸ್ವಾಮಿ ಕಿಡಿ

ಬೆಂಗಳೂರು : ನಾಡಪ್ರಭು ಕೆಂಪೇಗೌಡ ಕಟ್ಟಿದ ಬೆಂಗಳೂರು ಗುಂಡಿಯೂರು ಆಗಿ ಕುಖ್ಯಾತಿ ಪಡೆದಿರುವುದು ದುರ್ದೈವ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಕುಮಾರಸ್ವಾಮಿ ‘ ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರು ಈ ಅಪಮಾನಕ್ಕೆ ಹೊಣೆಗಾರರು.

ಬೆಂಗಳೂರು ಮತ್ತು ಕರ್ನಾಟಕ ಇವತ್ತು ಅದಕ್ಷರು, ಭ್ರಷ್ಟರ ಕೈಯ್ಯಲ್ಲಿ ಸಿಕ್ಕಿ ನರಳುತ್ತಿವೆ. ಹೆಜ್ಜೆ ಹೆಜ್ಜೆಗೂ ಸಾವಿನ ಗುಂಡಿ. ಕಂಡೆಲ್ಲೆಲ್ಲ ಕಸದ ರಾಶಿ. ಗ್ರೇಟರ್ ಬೆಂಗಳೂರು ಎಂದರೆ ಇದೇನಾ? ಜಿಬಿಎ ಏನು ಮಾಡುತ್ತಿದೆ? ಜನರ ತೆರಿಗೆ ದುಡ್ಡು ನುಂಗಿ ಗೊರಕೆ ಹೊಡೆಯುತ್ತಿದೆಯಾ? ಬೆಂಗಳೂರಿನಲ್ಲಿ ಆಡಳಿತದ ಘೋರ ವೈಫಲ್ಯವಾಗಿದೆ ಎಂದು ಉದ್ಯಮಿಗಳು ದೂರಿರುವುದು ಸರಿ ಇದೆ. ಅಂಗೈ ಹುಣ್ಣಿಗೆ ಕನ್ನಡಿ ಬೇಕಿಲ್ಲ. ಉದ್ಯಮಿಗಳು ಸರಕಾರದ ವೈಫಲ್ಯವನ್ನು ಇಷ್ಟು ಕಠಿಣವಾಗಿ ಎತ್ತಿ ತೋರಿಸಿರುವುದು ಇತಿಹಾಸದಲ್ಲಿ ಇದೇ ಮೊದಲು. ಈ ಸರಕಾರಕ್ಕೆ ಎಳ್ಳಷ್ಟೂ ಸಂಕೋಚ, ಆತ್ಮಾಭಿಮಾನವಿಲ್ಲ. ಕನ್ನಡಿಗರ ಸ್ವಾಭಿಮಾನವನ್ನು ಗುಂಡಿಪಾಲು ಮಾಡಿದೆ. ತೆರಿಗೆ ಹಾಕುವುದರಲ್ಲಿ ಸರಕಾರದ್ದು ರಾಕೆಟ್ ವೇಗ. ಗುಂಡಿ ಮುಚ್ಚುವುದರಲ್ಲಿ ಕೊನೇಪಕ್ಷ ಆಮೆ ವೇಗವೂ ಇಲ್ಲ. ಕೊಳ್ಳೆ ಹೊಡೆಯುವುದರಲ್ಲಿ ಇರುವ ಉನ್ಮಾದ, ಅಭಿವೃದ್ಧಿಯತ್ತ ವಿಪರೀತ ಉಪೇಕ್ಷೆ. ಚುನಾವಣಾ ಗ್ಯಾರಂಟಿಗಳಿಗೆ ರಾಜ್ಯದ ಅಭಿವೃದ್ಧಿ ಬಲಿಯಾಗಿ ಗ್ರೇಟರ್ ಬೆಂಗಳೂರು ಗಬ್ಬೆದ್ದು ನಾರುತ್ತಿದೆ! ಗುಂಡಿ ಮುಚ್ಚುವುದಕ್ಕೆ ಬಿಡಿಗಾಸಿಲ್ಲದ ಸರಕಾರ ಜನರಿಂದ ಕಿತ್ತುಕೊಳ್ಳುತ್ತಿರುವ ತೆರಿಗೆ ಹಣ ಏನು ಮಾಡುತ್ತಿದೆ? ಅದು ಯಾರ ಕಿಸೆ ಸೇರುತ್ತಿದೆ? ಇದಕ್ಕೆ ಉತ್ತರ ಬೇಕು. ಕಂಪನಿಗಳು ರಾಜ್ಯ ಸರಕಾರದ ಮೇಲೆ ಭರವಸೆ ಕಳೆದುಕೊಂಡು ನೆರೆರಾಜ್ಯಗಳತ್ತ ವಲಸೆ ಹೋಗುತ್ತಿವೆ. ಆ ರಾಜ್ಯಗಳು ಇಂಥ ಸಮಯಕ್ಕೇ ಕಾಯುತ್ತಾ ರಿಯಾಯ್ತಿ ಮೇಲೆ ರಿಯಾಯ್ತಿಗಳನ್ನು ನೀಡುತ್ತಿವೆ. ಭಂಡ ಸರಕಾರಕ್ಕೆ ಅರ್ಥವಾಗುತ್ತಿಲ್ಲ. ಈ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ. ಕಂಪನಿಗಳಿಗೆ ನನ್ನ ಮನವಿ ಇಷ್ಟೇ; ನೀವು ಬೆಂಗಳೂರು ಬಿಡುವುದು ಬೇಡ. ಈ ನಗರಕ್ಕೆ ಮಹಾನ್ ಪರಂಪರೆ, ಹಿನ್ನೆಲೆ ಇದೆ. ಈ ಎಮ್ಮೆ ಚರ್ಮದ ಸರಕಾರಕ್ಕೆ ಪಾಠ ಕಲಿಸುತ್ತೇವೆ. ನಿಮ್ಮ ಜತೆ ನಾವು, ಇಡೀ ಕರ್ನಾಟಕದ ಜನತೆ ಇದ್ದೇವೆ. ಹೋಗುತ್ತೇವೆ ಎನ್ನುವ ಮಾತನ್ನು ಮನಸ್ಸಿನಿಂದ ತೆಗೆದುಬಿಡಿ. ನಾವೆಲ್ಲರೂ ಸೇರಿ ಬೆಂಗಳೂರು ನಗರವನ್ನು ಬದಲಿಸೋಣ. We will Make Bengaluru Great Again ಎಂದು ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular