ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಕೊನೆ ದಿನಾಂಕ ವಿಸ್ತರಣೆ

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು ಸೆ.24ರವರೆಗೆ ವಿಸ್ತರಿಸಲಾಗಿದೆ. ಶುಲ್ಕ ಪಾವತಿಗೆ ಸೆ.25ರವರೆಗೆ ಅವಕಾಶ ನೀಡಲಾಗಿದೆ.

ಕರ್ನಾಟಕ ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ -2025 (ಕೆ-ಸೆಟ್ -2025) ಸಂಬಂಧಿಸಿದಂತೆ ದಿನಾಂಕ 22.08.2025 0 ಅಧಿಸೂಚನೆ ಹೊರಡಿಸಿ ದಿನಾಂಕ 18.09.2025 ರ ವರೆಗೆ ಅರ್ಜಿ ಸಲ್ಲಿಸಲು ಹಾಗೂ 19.09.2025 ರವರೆಗೆ ಶುಲ್ಕ ಪಾವತಿಸಲು ಕೊನೆಯ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು. ಆದರೆ ಕೆಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ಅರ್ಜಿ ಸಲ್ಲಿಕೆಯನ್ನು ವಿಸ್ತರಿಸುವಂತೆ ಕೋರಿದ್ದರಿಂದ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಕೊನೆಯ ಅವಕಾಶವಾಗಿ ಈ ಕೆಳಕಂಡಂತೆ ವಿಸ್ತರಿಸಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ವಿಸ್ತರಿಸಲಾದ ಕೊನೆಯ ದಿನಾಂಕ : 24.09.2025

ಆನ್‌ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 25.09.2025

ಸೂಚನೆ :

ಅರ್ಹತಾ ನಿಬಂಧನೆಗಳು ಮತ್ತು ಪರೀಕ್ಷಾ ದಿನಾಂಕ ಹಾಗೂ ಇತರೆ ವಿವರಗಳಿಗಾಗಿ ದಿನಾಂಕ 22.08.2025 ರ ವಿವರವಾದ ಅಧಿಸೂಚನೆಯನ್ನು ಓದಿಕೊಳ್ಳಲು ಸೂಚಿಸಿದೆ.

ಅರ್ಜಿ ಸಲ್ಲಿಕೆಗೆ ಇದು ಅಂತಿಮ ಹಾಗೂ ಕೊನೆಯ ಅವಕಾಶವಾಗಿರುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಸಹಾಯವಾಣಿ: 080-23 460 460.

ಇ-ಮೇಲ್: keauthority-ka@nic.in

ವೆಬ್‌ಸೈಟ್: http://kea.kar.nic.in

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read