HomeLatest NewsBIG NEWS: ಕೃಷಿ ಅಧಿಕಾರಿ / ಸಹಾಯಕ ಕೃಷಿ ಅಧಿಕಾರಿ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ರದ್ದು

BIG NEWS: ಕೃಷಿ ಅಧಿಕಾರಿ / ಸಹಾಯಕ ಕೃಷಿ ಅಧಿಕಾರಿ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ರದ್ದು

ಬೆಂಗಳೂರು: ದಿನಾಂಕ: 27-09-2025ರಂದು ನಿಗದಿಪಡಿಸಲಾಗಿದ್ದ ಕನ್ನಡ ಭಾಷಾ ಪರೀಕ್ಷೆ ಮತ್ತು ದಿನಾಂಕ: 28-09-2025 ಹಾಗೂ 05-10-2025ರಂದು ನಿಗದಿಪಡಿಸಲಾಗಿದ್ದ ಕೃಷಿ ಅಧಿಕಾರಿ / ಸಹಾಯಕ ಕೃಷಿ ಅಧಿಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಸಂಖ್ಯೆ ಪಿ.ಎಸ್.ಸಿ. 1 ಆರ್.ಟಿ.ಬಿ. 3/2024 2 20-09-2024 ಮತ್ತು ತಿದ್ದುಪಡಿ ಅಧಿಸೂಚನೆ ದಿನಾಂಕ 31-12-2024ರನ್ವಯ ಉಳಿಕೆ ಮೂಲ ವೃಂದದಡಿ ಅಧಿಸೂಚಿಸಲಾಗಿದ್ದ ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ 86 ಹುದ್ದೆಗಳು ಹಾಗೂ ಸಹಾಯಕ ಕೃಷಿ ಅಧಿಕಾರಿ 586 ಹುದ್ದೆಗಳಿಗೆ ದಿನಾಂಕ: 27-09-2025ರಂದು ಕನ್ನಡ ಭಾಷಾ ಪರೀಕ್ಷೆಯನ್ನು ಮತ್ತು ದಿನಾಂಕ: 28-09-2025 ಹಾಗೂ 05-10-2025ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಿಗದಿಪಡಿಸಲಾಗಿತ್ತು.

ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 388 ಸೆನೆನಿ 2024 ಭಾ-3, ದಿನಾಂಕ:04-09-2025ರಂದು ಹೊರಡಿಸಿರುವ ಸುತ್ತೋಲೆಯಲ್ಲಿ “ದಿನಾಂಕ: 28.10.2024ರ ಹಿಂದೆ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ದಿನಾಂಕ: 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ನಿಗಮ/ಮಂಡಳಿ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಯಾವುದಾದರೂ ತಿದ್ದುಪಡಿ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ ಅಂತಹ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನು ಸಹ ರದ್ದುಗೊಳಿಸಿ, ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸಬೇಕೆಂದು” ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದ್ದರಿಂದ ಸದರಿ ಕೃಷಿ ಅಧಿಕಾರಿ / ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ಅಧಿಸೂಚನೆಗಳನ್ನು ರದ್ದುಪಡಿಸಿ, ಪರಿಶಿಷ್ಟಜಾತಿ ಒಳ ಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ಅಧಿಸೂಚನೆಗಳನ್ನು ಹೊರಡಿಸಬೇಕಾಗಿದ್ದು, ದಿನಾಂಕ: 27-09-2025ರಂದು ನಿಗದಿಪಡಿಸಲಾಗಿದ್ದ ಕನ್ನಡ ಭಾಷಾ ಪರೀಕ್ಷೆ ಮತ್ತು ದಿನಾಂಕ: 28-09-2025 ಹಾಗೂ 05-10-2025ರಂದು ನಿಗದಿಪಡಿಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular