ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಲ ಪ್ರಮೋದ್ ಮುತಾಲಿಕ್ ಅವರಿಗೆ ಮಂಡ್ಯ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಇಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ನಿರ್ಬಂಧ ಹೇರಲಾಗಿದೆ. ಕಲ್ಲು ತೂರಾಟ ಪ್ರಕರಣವನ್ನು ಖಂಡಿಸಿ ಇಂದು ಮದ್ದೂರು ಪ್ರವಾಸವನ್ನು ಮುತಾಲಿಕ್ ಕೈಗೊಂಡಿದ್ದರು. ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ.
ಬಿಎನ್ಎಸ್ಎಸ್ ಕಾಯ್ದೆ 163 ರ ಅಡಿ ಮಂಡ್ಯ ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ. ಜಿಲ್ಲಾಧಿಕಾರಿ ಡಾ. ಕುಮಾರ್ ಪ್ರವೇಶ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ. ಪ್ರಮೋದ್ ಮುತಾಲಿಕ್ ವಿರುದ್ಧ ರಾಜ್ಯಾದ್ಯಂತ 30ಕ್ಕೂ ಹೆಚ್ಚು ಪ್ರಕರಣ ದಾಖಲಾಗಿವೆ. ಕೋಮು ದ್ವೇಷ ಬಿತ್ತುವ, ಪ್ರಚೋದನಾಕಾರಿ ಭಾಷಣ ಮಾಡುವ ಹಿನ್ನೆಲೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವುದನ್ನು ತಪ್ಪಿಸುವ ಕಾರಣಕ್ಕೆ ನಿರ್ಬಂಧ ಹೇರಲಾಗಿದೆ ಎನ್ನಲಾಗಿದೆ.