HomeLatest NewsBIG NEWS: ಎಲ್ಲಾ ಅಧಿಕಾರಿ, ನೌಕರರಿಗೆ ಮುಂಬಡ್ತಿಗೆ ತರಬೇತಿ ಕಡ್ಡಾಯ: ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ

BIG NEWS: ಎಲ್ಲಾ ಅಧಿಕಾರಿ, ನೌಕರರಿಗೆ ಮುಂಬಡ್ತಿಗೆ ತರಬೇತಿ ಕಡ್ಡಾಯ: ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ

ಬೆಂಗಳೂರು: ರಾಜ್ಯ ಸರ್ಕಾರದ ಸಿ ವೃಂದ ಮೇಲ್ಪಟ್ಟ ಎಲ್ಲಾ ಅಧಿಕಾರಿಗಳು, ನೌಕರರಿಗೆ ಮುಂಬಡ್ತಿಗೆ ತರಬೇತಿ ಕಡ್ಡಾಯಗೊಳಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.

ಕೇಂದ್ರ ನಾಗರಿಕ ಸೇವಾ ಅಧಿಕಾರಿಗಳಿಗೆ ಸೇವಾವಧಿ ನಡುವೆ ಲಾಲ್ ಬಹದ್ದೂರ್ ಶಾಸ್ತ್ರಿ ಅಕಾಡೆಮಿಯಲ್ಲಿ ತರಬೇತಿ ವ್ಯವಸ್ಥೆ ಇದ್ದು, ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ ವರ್ಗಕ್ಕೆ ತರಬೇತಿ ನೀಡುವ ಬಗ್ಗೆ ನಿರ್ಧರಿಸಲಾಗಿದೆ. ಮುಂಬಡ್ತಿಗಾಗಿ ಈ ತರಬೇತಿಯನ್ನು ಕಡ್ಡಾಯಗೊಳಿಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿರುವುದಾಗಿ ಸಂಪುಟ ಸಭೆಯ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಈ ಉದ್ದೇಶಕ್ಕಾಗಿ ರಾಜ್ಯ ನಾಗರಿಕ ಸೇವಾ ಮುಂಬಡ್ತಿಗಾಗಿ ತರಬೇತಿ ಕಡ್ಡಾಯ ನಿಯಮಗಳು -2025 ಕ್ಕೆ ಸಂಪುಟ ಸಭೆ ಅನುಮೋದನೆ ನೀಡಿದ್ದು, ಕರಡು ನಿಯಮಗಳಿಗೆ ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ಕಲ್ಪಿಸಿ ನಂತರ ಅಂತಿಮ ಅಧಿಸೂಚನೆ ಹೊರಡಿಸಲು ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular