HomeLatest Newsಹಿಂದೂ ಹೆಸರಲ್ಲಿ ನಕಲಿ ಐಡಿ ನೀಡಿ ಲಾಡ್ಜ್ ನಲ್ಲಿ ಮಹಿಳೆ ಜೊತೆಗಿದ್ದ ವ್ಯಕ್ತಿ ಅರೆಸ್ಟ್

ಹಿಂದೂ ಹೆಸರಲ್ಲಿ ನಕಲಿ ಐಡಿ ನೀಡಿ ಲಾಡ್ಜ್ ನಲ್ಲಿ ಮಹಿಳೆ ಜೊತೆಗಿದ್ದ ವ್ಯಕ್ತಿ ಅರೆಸ್ಟ್

ಚಿಕ್ಕಮಗಳೂರು: ಹಿಂದೂ ಹೆಸರಲ್ಲಿ ನಕಲಿ ಗುರುತಿನ ಚೀಟಿ ಸೃಷ್ಟಿಸಿ ಲಾಡ್ಜ್ ವೊಂದರಲ್ಲಿ ಹಿಂದೂ ಮಹಿಳೆಯ ಜೊತೆಗಿದ್ದ ಅನ್ಯಕೋಮಿನ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿಯಲ್ಲಿ ಘಟನೆ ನಡೆದಿದೆ. ಬಾಳೆಹೊನ್ನೂರು ಮೂಲದ ಅಬ್ದುಲ್ ಸಮದ್(42) ಎಂಬಾತ ರಮೇಶ್ ಹೆಸರಲ್ಲಿ ನಕಲಿ ಐಡಿ ಕಾರ್ಡ್ ನೀಡಿ ಹಿಂದೂ ಮಹಿಳೆಯ ಜೊತೆಗೆ ತಾವು ದಂಪತಿ ಎಂದು ಸುಳ್ಳು ಹೇಳಿ ಲಾಡ್ಜ್ ನಲ್ಲಿ ತಂಗಿದ್ದ.

ಇವರ ಬಗ್ಗೆ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಶೃಂಗೇರಿ ಠಾಣೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ನಕಲಿ ಐಡಿ ಸೃಷ್ಟಿಸಿರುವುದು ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular