ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಿಗೆ ನಾಳೆಯಿಂದ ಅ.7 ವರೆಗೆ ದಸರಾ ರಜೆ ಘೋಷಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಸೆಪ್ಟೆಂಬರ್ 20ರಿಂದ ಅಕ್ಟೋಬರ್ 7ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಈ ರಜೆಯ ಅವಧಿಯು ದಸರಾ ಹಬ್ಬ, ಗಾಂಧಿ ಜಯಂತಿ ಮತ್ತು ವಾಲ್ಮೀಕಿ ಜಯಂತಿ ರಜೆಗಳನ್ನು ಒಳಗೊಂಡಿದೆ. ರಾಜ್ಯ ಸರ್ಕಾರದ ಆದೇಶದಂತೆ ಕರ್ನಾಟಕದ ಎಲ್ಲಾ ಶಾಲಾ ಮಕ್ಕಳಿಗೆ ಈ ರಜೆ ಅನ್ವಯಿಸುತ್ತದೆ.
ರಾಜ್ಯದ ಎಲ್ಲಾ ಶಾಲೆಗಳಿಗೆ ನಾಳೆಯಿಂದ ಅ.7 ವರೆಗೆ ದಸರಾ ರಜೆ ಘೋಷಣೆದಸರಾ ರಜೆಯು ಸೆಪ್ಟೆಂಬರ್ 20, 2025 ರಿಂದ ಆರಂಭವಾಗಿ ಅಕ್ಟೋಬರ್ 7, 2025 ರವರೆಗೆ ಮುಂದುವರಿಯಲಿದೆ.ದಸರಾ ರಜೆಯು ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 7, 2025 ರವರೆಗೆ ಒಟ್ಟು 18 ದಿನಗಳವರೆಗೆ ಇರಲಿದೆ. ಈ ರಜೆಯು ರಾಜ್ಯದ ಎಲ್ಲಾ ಶಾಲೆಗಳಿಗೆ ಅನ್ವಯವಾಗಲಿದ್ದು, ವಿದ್ಯಾರ್ಥಿಗಳಿಗೆ ಈ ಅವಧಿಯಲ್ಲಿ ಶೈಕ್ಷಣಿಕ ಚಟುವಟಿಕೆಗಳಿಂದ ವಿರಾಮ ಸಿಗಲಿದೆ.