BREAKING : ಬಾನು ಮುಷ್ತಾಕ್ ‘ಮೈಸೂರು ದಸರಾ’ ಉದ್ಘಾಟಿಸೋದು ಫಿಕ್ಸ್ : ‘ಸುಪ್ರೀಂಕೋರ್ಟ್’ ನಲ್ಲೂ ಅರ್ಜಿ ವಜಾ.!

ಬೆಂಗಳೂರು : ಬಾನು ಮುಷ್ತಾಕ್ ‘ಮೈಸೂರು ದಸರಾ’ ಉದ್ಘಾಟಿಸೋದು ಫಿಕ್ಸ್ ಆಗಿದ್ದು,  ‘ಸುಪ್ರೀಂಕೋರ್ಟ್’ ನಲ್ಲೂ ಅರ್ಜಿ ವಜಾ ಆಗಿದೆ. ಹೌದು. ದಸರಾ ಉದ್ಘಾಟನೆಗೆ ‘ಬಾನು ಮುಷ್ತಾಕ್’ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.

ಸೆ.22 ರಂದು ದಸರಾ ಉದ್ಘಾಟನೆ ನಡೆಯಲಿದ್ದು, ಆದ್ದರಿಂದ ತುರ್ತು ಅರ್ಜಿ ವಿಚಾರಣೆ ನಡೆಸಬೇಕೆಂದು ಸಿಜೆಐ ಗವಾಯಿ ಮುಂದೆ ಮನವಿ ಮಾಡಲಾಗಿತ್ತು. ಆದರೀಗ ಬಾನು ಮುಷ್ತಾಕ್’ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿತ್ತು.ಸರ್ಕಾರದ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೂ ಅರ್ಜಿ ಸಲ್ಲಿಕೆಯಾಗಿತ್ತು.

ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಪ್ರತಾಪ್ ಸಿಂಹ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಿಜೆ ವಿಭು ಬಖ್ರು, ನ್ಯಾ.ಸಿ.ಎಂ.ಜೋಶಿ ಅವರಿದ್ದ ಪೀಠ ಪ್ರತಾಪ್ ಸಿಂಹ ಅರ್ಜಿ ವಜಾಗೊಳಿಸಿದೆ. ದಸರಾ ಉದ್ಘಾಟಕರ ಆಯ್ಕೆಯಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗಿಲ್ಲ ಎಂದು ಹೇಳಿ ಪ್ರತಾಪ್ ಸಿಂಹ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಮಾಡಿರುವ ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಗುತ್ತದೆ. ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆ ಮಾಡಬೇಕೆಂಬ ಸಂಪ್ರದಾಯವಿದೆ. ಬಾನು ಮುಷ್ತಾಕ್ ಹಿಂದೂ ವಿರೋಧಿ. ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದೆ. ಸರ್ಕಾರದ ಕ್ರಮಕ್ಕೆ ತಡೆ ನೀಡಬೇಕು.
ಮೈಸೂರಿನ ರಾಜಮನಎತನದವರೂ ಸರ್ಕಾರದ ನಡೆ ವಿರೋಧಿಸಿದ್ದಾರೆ. ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿಯಾಗಿದೆ. ಬಾನು ಮುಷ್ತಾಕ್ ಅವರಿಗೆ ನೀಡಿದ ಆಹ್ವಾನ ಹಿಂಪಡೆಯುವಂತೆ ನಿರ್ದೇಶನ ನೀಡುವಂತೆ ಪ್ರತಾಪ್ ಸಿಂಹ ಮನವಿ ಮಾಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read