ಬೆಂಗಳೂರು : ಬಹು ನಿರೀಕ್ಷಿತ ‘ಕಾಂತಾರ ಚಾಪ್ಟರ್ 1’ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಸೆ.22 ಟ್ರೇಲರ್ ರಿಲೀಸ್ ಆಗಲಿದೆ.
ಕಾಂತಾರ ಚಾಪ್ಟರ್ 1 ಬಹಳ ನಿರೀಕ್ಷೆ ಮೂಡಿಸಿದ ಸಿನಿಮಾ. ಈ ಸಿನಿಮಾ ಅಕ್ಟೋಬರ್ 2 ರಂದು ತೆರೆಗೆ ಬರಲಿದೆ. ಈ ಚಿತ್ರದ ಟ್ರೇಲರ್ ಸೆ.22 ರಂದು ಬಿಡುಗಡೆ ಆಗಲಿದೆ.
ಈ ಚಿತ್ರದಲ್ಲಿ ರಿಷಬ್ ಶೆಟ್ಟಿಗೆ ರುಕ್ಮಿಣಿ ವಸಂತ್ ಜೋಡಿಯಾಗಿದ್ದಾರೆ. ನಟ ರಿಷಬ್ ಶೆಟ್ಟಿ ಅವರ ಬಹು ನಿರೀಕ್ಷಿತ ‘ಕಾಂತಾರ ಅಧ್ಯಾಯ 1’ ಚಿತ್ರ 2025 ರ ದಸರಾ ಸಮಯದಲ್ಲಿ ಬಿಡುಗಡೆಯಾಗಲಿದೆ.ಅ. 2 ರಂದು ಏಳು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದ್ದು, ಸಿನಿಮಾ ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿಸಿದೆ. ‘ಕಾಂತಾರ’ ಬಹು ಭಾಷೆಗಳಲ್ಲಿ ಬಿಡುಗಡೆಯಾಗಿ ಭಾರೀ ಯಶಸ್ಸು ಕಂಡಿತ್ತು. ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟಿದೆ. ಇದೀಗ ಕಾಂತಾರ ಚಾಪ್ಟರ್ 1 ತೆರೆ ಮೇಲೆ ಬರಲು ಸಜ್ಜಾಗುತ್ತಿದೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಇಂಗ್ಲೀಷ್ ಹಾಗೂ ಬೆಂಗಾಲಿ ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ.
You Might Also Like
TAGGED:ಕಾಂತಾರ