ಗದಗ: ನಾಲ್ಕು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಎಫ್ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಗದಗದಲ್ಲಿ ನಡೆದಿದೆ.
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬಿಇಓ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಎಫ್ ಡಿಸಿ ಎಸ್.ಎಸ್.ಚೌತಾಯಿ ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಸೇವಾ ಪುಸ್ತಕ ಮಹಾಲೆಕ್ಕಪಾಲಕರ ಕಚೇರಿಗೆ ಕಳುಹಿಸಲು ಚೌತಾಯಿ ಲಂಚ ಪಡೆಯುತ್ತಿದ್ದರು. ನಿವೃತ್ತ ಶಿಕ್ಷಕ ಎಸ್.ಬಿ.ಲಕ್ಷ್ಮೀಶ್ವರ ಅವರಿಂದ ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯ ಎಡಿಸಿ ಚೌತಾಯಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.