ಬೆಂಗಳೂರು: ಪಿಜಿಯಲ್ಲಿ ವಾಸವಾಗಿದ್ದ ಯುವತಿಗೆ ಸಾಫ್ಟ್ ವೇರ್ ಇಂಜಿನಿಯರ್ ಓರ್ವ ಲೈಂಗಿಕ ಕಿರುಕುಳ ನೀಡಿ ಚಾಕು ಇರಿದಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಡೆದಿದೆ.
ವೈಟ್ ಫೀಲ್ಡ್ ನಲ್ಲಿರುವ ಕೋ-ಲಿವಿಂಗ್ ಪಿಜಿಯಲ್ಲಿ ಈ ಘಟನೆ ನಡೆದಿದೆ. ಯುವತಿ ಹಾಗೂ ಆರೋಪಿ ಸಾಫ್ಟ್ ವೇರ್ ಇಂಜಿನಿಯರ್ ಒಂದೇ ಪಿಜಿಯಲ್ಲಿ ವಾಸವಾಗಿದ್ದರು. ಆಂಧ್ರಪ್ರದೇಶ ಮೂಲದ ಬಾಬು ಎಂಬ ಸಾಫ್ಟ್ ವೇರ್ ಇಂಜಿನಯರ್ ಮದುವೆಯಾಗಿ ಇಬ್ಬರು ಮಕ್ಕಳು ಇದ್ದರೂ ಪಿಜಿಯಲ್ಲಿ ವಾಸವಾಗಿದ್ದ. ಅದೇ ಪಿಜಿಯಲ್ಲಿ ಯುವತಿ ಕೂಡ ವಾಸವಾಗಿದ್ದಳು,
ಒಂದೇ ಪಿಜಿ ಇಬ್ಬರ ನಡುವೆ ಪರಿಚಯ, ಸ್ನೇಹ. ಯುವತಿಯ ಖಾಸಗಿ ಫೋಟೋ ಇಟ್ಟುಕೊಂಡು ಬಾಬು 70 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದ. ಯುವತಿ ತನ್ನ ಬಳಿ ಹಣವಿಲ್ಲ ಎಂದಾಗ ಆಕೆಯ ಮೊಬೈಲ್ ಕಸಿದಿಕೊಂಡು ಕೆಲ ಹಣ ವರ್ಗಾಯಿಸಿಕೊಂಡಿದ್ದನಂತೆ. ಮತ್ತೆ ಹಣಕ್ಕೆ ಬೇಡಿಕೆ ಇಟ್ಟಾಗ ಯುವತಿ ಹಣವಿಲ್ಲ ಸಾಲ ಮಾಡಿ ಕೊಡುವುದಾಗಿ ಹೇಳಿದ್ದಳಂತೆ ಇದೇ ವಿಚಾರವಾಗಿ ಗಲಾಟೆ ಮಾಡಿದ ಬಾಬು ಯುವತಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿದ್ದಾನೆ.
ಹಲ್ಲೆಗೊಳಗದ ಯುವತಿ ಪೊಲೀಸ್ ಠಾಣೆಯಲ್ಲಿ ದೂತು ನೀಡಿದ್ದಳು. ಸದ್ಯ ಆರೋಪಿ ಬಾಬು ನನ್ನು ವೈಟ್ ಫೀಲ್ಡ್ ಪೊಲೀಸರು ಬಂಧಿಸಿದ್ದಾರೆ.