ಬೆಂಗಳೂರು: ಜಾತಿ ಗಣತಿ ಸಮೀಕ್ಷೆ ನಡೆಸುವುದು ಪಕ್ಕಾ ಎಂದು ಸರ್ಕಾರ ತಿಳಿಸಿದೆ. ಸಮೀಕ್ಷೆ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಅಧಿಕೃತ ಮುದ್ರೆ ಒತ್ತಲಾಗಿದೆ.
ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರವರೆಗೆ ಸಮೀಕ್ಷೆ ನಡೆಯಲಿದೆ. ಸಮೀಕ್ಷೆಯ ದಿನಾಂಕಕ್ಕೆ ಇಲಾಖೆಯಿಂದ ಮತ್ತೊಮ್ಮೆ ಒಪ್ಪಿಗೆ ಪಡೆದುಕೊಳ್ಳಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಮೀಕ್ಷೆ ನಡೆಸಲು ಅನುಮೋದನೆ ನೀಡಲಾಗಿದೆ. ಹೀಗಾಗಿ ಜಾತಿ ಗಣತಿ ಸಮೀಕ್ಷೆ ನಡೆಸುವುದು ಖಚಿತವಾಗಿದೆ.
ಸಿಎಂ ಹೇಳಿಕೆ
ಹಿಂದುಳಿದ ವರ್ಗಗಳ ಆಯೋಗ ಶಾಸನಬದ್ಧ ಸಂಸ್ಥೆಯಾಗಿದ್ದು, ಅವರಿಗೆ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಸಮೀಕ್ಷೆಯ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಅಂತಿಮ ನಿರ್ಧಾರ ಆಯೋಗವೇ ಕೈಗೊಳ್ಳಲಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವಿಚಾರದಲ್ಲಿ ಬಿಜೆಪಿ ಪಕ್ಷ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎಂದು ಆರೋಪಿಸುತ್ತಿದ್ದಾರೆ. ಇದನ್ನು ಎಲ್ಲ ಸಚಿವರೂ ಒಕ್ಕೊರಲಿನಿಂದ ಖಂಡಿಸಬೇಕು ಎಂದು ಎಲ್ಲ ಸಚಿವರಿಗೂ ಸೂಚಿಸಿದ್ದೇನೆ. ಸಮೀಕ್ಷೆಯು ನಿಗದಿತ ದಿನ ಅಂದರೆ ಸೆಪ್ಟೆಂಬರ್ 22ರಿಂದ ಪ್ರಾರಂಭವಾಗಲಿದ್ದು, ಸಮೀಕ್ಷೆಯನ್ನು ಮುಂದೂಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಹಿಂದುಳಿದ ವರ್ಗಗಳ ಆಯೋಗ ಶಾಸನಬದ್ಧ ಸಂಸ್ಥೆಯಾಗಿದ್ದು, ಅವರಿಗೆ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಸಮೀಕ್ಷೆಯ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಅಂತಿಮ ನಿರ್ಧಾರ ಆಯೋಗವೇ ಕೈಗೊಳ್ಳಲಿದೆ.
— Siddaramaiah (@siddaramaiah) September 19, 2025
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವಿಚಾರದಲ್ಲಿ ಬಿಜೆಪಿ ಪಕ್ಷ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್ ಸರ್ಕಾರ ಹಿಂದೂ… pic.twitter.com/xqps37sp6k