BIG NEWS : ರಾಜ್ಯಾದ್ಯಂತ ಸೆ.22 ರಿಂದ ‘ಜಾತಿ ಗಣತಿ ಸಮೀಕ್ಷೆ’ ಆರಂಭ : ಸರ್ಕಾರದಿಂದ ಅಧಿಕೃತ ಆದೇಶ.!

ಬೆಂಗಳೂರು : ರಾಜ್ಯಾದ್ಯಂತ ಸೆ.22 ರಿಂದ ಜಾತಿ ಗಣತಿ ಆರಂಭವಾಗಲಿದ್ದು, ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲು ಸರ್ಕಾರದ ಅನುಮೋದನೆ ನೀಡಿ ಆದೇಶಿಸಿದೆ.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ಇವರು ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು 2:22-09-2025 ಕೈಗೊಳ್ಳಲು ಉದ್ದೇಶಿಸಿದ್ದು, ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ರವರಿಗೆ ವಿಡಿಯೋ ಕಾನ್ಸರೆನ್ಸ್ ಮೂಲಕ ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ಹಾಗೂ ಸಮೀಕ್ಷಾದಾರರಿಗೆ ಅಗತ್ಯ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಹಾಗೂ ಸಾರ್ವಜನಿಕರನ್ನು ಸಮೀಕ್ಷಾ ಕಾರ್ಯದಲ್ಲಿ ಪೂರ್ಣವಾಗಿ ಪಾಲ್ಗೊಳ್ಳಲು ಅರಿವು ಮೂಡಿಸಲು ತಿಳಿಸಲಾಗಿರುತ್ತದೆ.

ಈ ಹಿನ್ನೆಲೆಯಲ್ಲಿ, ದಿನಾಂಕ:22-09-2025 ರಿಂದ 07-10-2025ರ ವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ರಾಜ್ಯಾದ್ಯಂತ ಕೈಗೊಳ್ಳಲು ದಿನಾಂಕ ನಿಗದಿಪಡಿಸಿ ಆದೇಶ ಹೊರಡಿಸುವಂತೆ ಕೋರಿ ಪ್ರಸ್ತಾವನೆ ಸಲ್ಲಿಸಿರುತ್ತಾರೆ. ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ದಿನಾಂಕ:22-09-2025 ರಿಂದ 07-10-2025ರ ವರೆಗೆ ಕೈಗೊಳ್ಳಲು ಸರ್ಕಾರದ ಅನುಮೋದನೆ ನೀಡಿ ಆದೇಶಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read