ಬೆಂಗಳೂರಿಗರೇ ಗಮನಿಸಿ : ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ‘ಕಾವೇರಿ ನೀರು’ ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರು: ಬೆಂಗಳೂರಿಗರೇ ಗಮನಿಸಿ.. ಇಂದು ಮತ್ತು ನಾಳೆ ಈ ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆ ಸ್ಥಗಿತವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ನಗರದ ನಾಗರಬಾವಿ ಬಿ.ಡಿ.ಎ ಕಾಂಪ್ಲೆಕ್ಸ್ ಪ್ರದೇಶದ 600 ಮಿಮೀ ವ್ಯಾಸದ ಮುಖ್ಯ ಕಾವೇರಿನೀರಿನ ಪೈಪ್ಲೈನ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದ್ದು, ಪೂರೈಕೆಯಲ್ಲಿ ವ್ಯತ್ಯಯವಾಗಿದೆ ಎಂದುಬೆಂಗಳೂರು ಜಲಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯನಗರ, ಬನವಾಸಿ ರಸ್ತೆ, ಕೋರಮಂಗಲ,ಗಾಂಧಿನಗರ, ಬಿ.ಡಿ.ಎ. ಕಾಂಪ್ಲೆಕ್ಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕಾರ ನೀಡುವಂತೆ ಬೆಂಗಳೂರು ಜಲಮಂಡಳಿ ಮನವಿ ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read