ರಾಯಚೂರು: ಹೋಟೆಲ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಹೋಟೆಲ್ ಗಳಲ್ಲಿ ಆಹಾರಕ್ಕೆ ರಾಸಾಯನಿಕ ಬಣ್ಣಗಳ ಬಳಕೆ, ನಿಷೇಧಿತ ಪ್ಲಾಸ್ಟಿಕ್ ಬಳಕೆ, ಆಹಾರ ಸುರಕ್ಷತೆ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ವಿವಿಧ ಹೋಟೆಲ್ ಗಳ ಮಾಲೀಕರಿಗೆ ಅಧಿಕಾರಿಗಳು ದಂಡ ವಿಧಿಸಿದ್ದಾರೆ.
ರಾಯಚೂರಿನ ಸ್ಟೇಷನ್ ರಸ್ತೆ, ಮಂತ್ರಾಲಯ ರಸ್ತೆ ಸೇರಿದಂತೆ ನಗರದ ಹಲವೆಡೆಗಳಲ್ಲಿ ಹತ್ತು ಕಡೆಗಳಲ್ಲಿ ಅಧಿಕಾರಿಗಳು ಹೋಟೆಲ್ ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ರಾಯಚೂರು ಉಪವಿಭಾಗದ ಸಹಾಯಕ ಆಯುಕ್ತ ಗಜಾನನ ಬಾಳೆ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಆಹಾರ ಸುರಕ್ಷತಾ ನಿಯಮಗಳನ್ನು ಉಲ್ಲಂಘನೆ ಮಾಡಿದ ಹೋಟೆಲ್ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, 50 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ.