ಮಡಿಕೇರಿ: ಬ್ಯೂಟಿ ಪಾರ್ಲರ್ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಕೇರಳ ಮೂಲದ ಶಿಜು ಹಾಗೂ ಪ್ರದೀಪ್ ಎಂಬುವವರನ್ನು ಬಂಧಿಸಿದ್ದಾರೆ. ಆರೋಪಿಗಳು ರಾಜ್ಯದ ವಿವಿಧ ಭಾಗಗಳಿಂದ ಮಹಿಳೆಯರನ್ನು ಕರೆಸಿ ವೇಶ್ಯಾವಾಟಿಕೆ ನಡೆಸುತ್ತಿದ್ದರು.
ದಾಳಿ ವೇಳೆ ನಾಲ್ವರು ಮಹಿಳೆಯರನ್ನು ರಕ್ಷಿಸಲಾಗಿದೆ. ಇಬ್ಬರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.