ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಐವರು ಉಪನ್ಯಾಸಕರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಅತಿಥಿ ಉಪನ್ಯಾಸಕರಾದ ಸ್ವರೂಪ್ ಕುಮಾರ್, ರಾಮಾಂಜನೇಯ, ರಂಗಸ್ವಾಮಿ, ಜಗನ್ನಾಥ್ ಹಾಗೂ ಶಿವರಾಮ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.
ಅಲ್ಲದೇ ಉಪನ್ಯಾಸಕರ ಹಲವು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಟೀಕೆಗೆ ಕಾರಣವಾಗಿದೆ. ಬೆಂಗಳೂರು ವಿವಿ ಆವರಣದಲ್ಲಿ ಶರ್ಟ್ ಬಿಚ್ಚಿ ಡ್ಯಾನ್ಸ್ ಮಾಡಿರುವುದು ಹಾಗೂ ಕಾರಿನಲ್ಲಿ ಕುಳಿತು ಮದ್ಯ ಸೇವಿಸಿರುವ ವಿಡಿಯೋಗಳು ವೈರಲ್ ಆಗಿದೆ.