ತುಮಕೂರು: ಟ್ಯೂಷನ್ ಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಪಾವಗಡದಲ್ಲಿ ಈ ದುರಂತ ಸಂಭವಿಸಿದೆ. ಪ್ರೀತಿ ಮೃತ ವಿದ್ಯಾರ್ಥಿನಿ. ದ್ವಿಚಕ್ರವಾಹನದಲ್ಲಿ ಇಬ್ಬರು ಸ್ನೇಹಿತೆಯರು ಟ್ಯೂಷನ್ ಗೆ ಹೋಗುತ್ತಿದ್ದರು. ಈ ವೇಳೆ ಬೈಕ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಇನ್ನೋರ್ವ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾಳೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.