ಹಾಸನ: ಲೈಂಗಿಕ ಕಿರುಕುಳ ನೀಡಿ, ಕೊಲೆ ಬೆದರಿಕೆ ಹಾಕಿದ ಆರೋಪದಲ್ಲಿ ಬೇಲೂರು ತಾಲೂಕು ಶಿಕ್ಷಣಾಧಿಕಾರಿ (ಬಿಇಒ) ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ರಾಜೇಗೌಡ ಅಮಾನತುಗೊಂಡಿರುವ ಬಿಇಒ. ರಾಜೇಗೌಡ ವಿರುದ್ಧ, ಲೈಂಗಿಕ ಕಿರುಕುಳ, ಕೊಲೆ ಬೆದರಿಕೆ, ಭ್ರಷ್ಟಾಚಾರ, ಕರ್ತವ್ಯಲೋಪ ಸೇರಿದಂತೆ ಹಲವು ಆರೋಪಗಳು ಕೇಳಿಬಂದಿದ್ದವು. ಮೇಲ್ನೋಟಕ್ಕೆ ಆರೋಪ ಸತ್ಯಕ್ಕೆ ಹತ್ತಿರವಿದೆ ಎಂದು ಹಾಸನ ಡಿಡಿಪಿಐ ವರದಿ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಅದೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರು ರಾಜೇಗೌಡ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.