ನವದೆಹಲಿ: ರಾಜ್ಯದ ರೈತರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಐದು ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಗೆ ಸಮ್ಮತಿ ಸೂಚಿಸಿದೆ.
2025-26ನೇ ಸಾಲಿನ ಮುಂಗಾರಿನ ಅವಧಿಯಲ್ಲಿ ಬೆಳೆದ ಹೆಸರು ಕಾಳು, ಉದ್ದಿನ ಕಾಳು, ನೆಲಗಡಲೆ (ಶೇಂಗಾ), ಸೋಯಾಬಿನ್ ಹಾಗೂ ಸೂರ್ಯಕಾಂತಿ ಹೀಗೆ ಐದು ಧಾನ್ಯಗಳನ್ನು ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಪತ್ರ ಬರೆದಿದ್ದರು.
ಜೋಶಿ ಅವರ ಮನವಿಗೆ ಸ್ಪಂದಿಸಿದ ಪ್ರಧಾನಿ ಮೋದಿ, ಕರ್ನಾಟಕದ ರೈತರ ನೆರವಿಗೆ ಮುಂದಾಗುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್, ಬೆಂಬಲ ಬೆಲೆಯಲ್ಲಿ ಆಹಾರ ಧಾನ್ಯ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ.