ಬೆಂಗಳೂರು: ಕಳೆದ ಫೆಬ್ರವರಿಯಲ್ಲಿ 2024-29ರ ನಮ್ಮ ಹೊಸ ಕರ್ನಾಟಕ ಪ್ರವಾಸೋದ್ಯಮ ನೀತಿ ಅನಾವರಣಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ನಮ್ಮ ರಾಜ್ಯವನ್ನು ಭಾರತದ ನಂ. 1 ಪ್ರವಾಸೋದ್ಯಮ ತಾಣವನ್ನಾಗಿ ಪರಿವರ್ತಿಸಲು ಇದು ನಮ್ಮ ಕಾರ್ಯತಂತ್ರದ ನೀಲಿನಕ್ಷೆಯಾಗಿದೆ. 2029ರ ವೇಳೆಗೆ 1.5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಹಾಗೂ 8 ಸಾವಿರ ಕೋಟಿ ಹೂಡಿಕೆಗಳನ್ನು ಆಕರ್ಷಿಸುವ ಗುರಿ ಹೊಂದಿದ್ದೇವೆ ಎಂದು ಹೇಳಿದ್ದಾರೆ.
ನಮ್ಮ ಕರಾವಳಿ ಆಕರ್ಷಣೆಯನ್ನು ಹೆಚ್ಚಿಸಲು ₹200 ಕೋಟಿ ಮೀಸಲಿಡಲಾಗಿದೆ. ಇದರಿಂದ ಕರಾವಳಿಯುದ್ದಕ್ಕೂ 329 ಕಿ.ಮೀ. ಪ್ರಶಾಂತ ಕರಾವಳಿ ಪ್ರವಾಸೋದ್ಯಮ, ಪಶ್ಚಿಮ ಘಟ್ಟಗಳಲ್ಲಿನ ರೋಮಾಂಚಕ ಪಯಣ, ಬೆಂಗಳೂರಿನ ಐಷಾರಾಮಿ ಆತಿಥ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.