ಹಾವೇರಿ: ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ನಡೆದಿದೆ.
ಇಲ್ಲಿನ ಅಕ್ಕಿಆಲೂರಿನ ಧರ್ಮಾ ಕಾಲುವೆ ಬಳಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಪ್ರದೀಪ್ ಕಾನೊಳ್ಳಿ (30), ಸುನೀಲ್ ನಿಗೋಜಿ (25) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.