ಬಾಗಲಕೋಟೆ: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬಾಗಲಕೋಟೆಯ ಐವತ್ತು ಹಾಸಿಗೆ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 12 ರೋಗಿಗಳನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.
ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಪೊಲೀಸರು, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯತಿ ಸಿಇಒ ಶಶಿಧರ್ ಕುರೇರಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.