ಬೆಂಗಳೂರು: ಭಾರಿ ವಿರೋಧದ ಹಿನ್ನೆಲೆ ಜಾತಿಗಣತಿ ನಮೂನೆಯಿಂದ 33 ಕ್ರಿಶ್ಚಿಯನ್ ಜಾತಿಗಳನ್ನು ಕೈ ಬಿಡಲಾಗಿದೆ. ಕ್ರೈಸ್ತ ಧರ್ಮಕ್ಕೆ ಮತಾಂತರ ಆದವರು ಇತರೆ ಕಾಲಂನಲ್ಲಿ ಜಾತಿ ಬರೆಸಲು ಅವಕಾಶ ನೀಡಲಾಗಿದೆ.
ಮೀಸಲಾತಿ ರದ್ದು ತಡೆಗೆ 13 ಜಾತಿಗಳನ್ನು ಕ್ರಿಶ್ಚಿಯನ್ ನಲ್ಲೇ ಮುಂದುವರಿಸಲಾಗುವುದು. ಇದರಿಂದಾಗಿ ಜಾತಿ ಗಣತಿಗೆ ಇದ್ದ ತೊಡಕು ನಿವಾರಣೆಯಾಗಿದ್ದು, ನಾಳೆಯಿಂದಲೇ ಸರ್ವೆ ಕಾರ್ಯ ಆರಂಭವಾಗಲಿದೆ.
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಲಿಂಗಾಯಿತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್ ಹೀಗೆ 46 ಹಿಂದೂ ಜಾತಿಗಳ ಹೆಸರನ್ನು ಕ್ರಿಶ್ಚಿಯನ್ ನೊಂದಿಗೆ ಸೇರಿಸಿ ಸಿದ್ಧಪಡಿಸಿದ್ದ ಜಾತಿಗಳ ಪಟ್ಟಿಗೆ ತೀವ್ರ ವಿರೋಧವಾದ ಹಿನ್ನೆಲೆಯಲ್ಲಿ ಆನ್ಲೈನ್ ಸಮೀಕ್ಷಾ ನಮೂನೆಯಿಂದ 33 ಜಾತಿಗಳ ಹೆಸರು ಕೈಬಿಡಲು ಹಿಂದುಳಿದ ವರ್ಗಗಳ ಆಯೋಗ ನಿರ್ಧಾರ ಕೈಗೊಂಡಿದೆ. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರು ಬಯಸಿದಲ್ಲಿ ತಮ್ಮ ಮೂಲ ಜಾತಿಯ ಹೆಸರನ್ನು ಇತರೆ ಕಾಲಂನಲ್ಲಿ ನಮೂದಿಸಲು ಅವಕಾಶ ನೀಡಲು ನಿರ್ಧರಿಸಲಾಗಿದೆ.