ಬೆಂಗಳೂರು: ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರನ್ನು ಮತದಾರರ ಪಟ್ಟಿಯಿಂದ ಅನಧಿಕೃತವಾಗಿ ಕೈಬಿಡಲಾಗಿರುವ ಸಂಬಂಧ ಆಳಂದ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಯನ್ನು ನಡೆಸಲು ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ.ಸಿಂಗ್ ಅವರ ನೇತೃತ್ವದಲ್ಲಿ ಸಿಐಡಿಯ ವಿಶೇಷ ತನಿಖಾ ತಂಡವನ್ನು ರಚಿಸಿ, ಆದೇಶಿಸಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಬಿಜಯ್ ಕುಮಾರ್ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ರಾಜ್ಯ ಸರ್ಕಾರ ಶನಿವಾರ ಆದೇಶಿಸಿದೆ. ಸಿಐಡಿ ಎಸ್ಪಿಗಳಾದ ಸೈದುಲು ಅಡಾವತ್, ಶುಭಾನ್ವಿತ ಅವರು ಎಸ್ಐಟಿ ಸದಸ್ಯರಾಗಿದ್ದಾರೆ. ಉಳಿದಂತೆ ಅಗತ್ಯ ಅಧಿಕಾರಿ ಮತ್ತು ಸಿಬ್ಬಂದಿ ನಿಯೋಜನೆ ಹಾಗೂ ಮೂಲ ಸೌಲಭ್ಯ ಒದಗಿಸಲು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸರ್ಕಾರ ಸೂಚಿಸಿದೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆಳಂದ ಕ್ಷೇತ್ರದ ಮತಗಳ್ಳತನ ಬಹಿರಂಗಪಡಿಸಿದ್ದರು. ಇದರ ಜಾಲ ಬಯಲಿಗೆಳೆಯಲು ಸರ್ಕಾರ ಎಸ್ಐಟಿ ರಚನೆ ಮಾಡಿದೆ.
ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರನ್ನು ಮತದಾರರ ಪಟ್ಟಿಯಿಂದ ಅನಧಿಕೃತವಾಗಿ ಕೈಬಿಡಲಾಗಿರುವ ಸಂಬಂಧ ಆಳಂದ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಯನ್ನು ನಡೆಸಲು ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ.ಸಿಂಗ್ ಅವರ ನೇತೃತ್ವದಲ್ಲಿ ಸಿಐಡಿಯ ವಿಶೇಷ ತನಿಖಾ ತಂಡವನ್ನು ರಚಿಸಿ, ಆದೇಶಿಸಲಾಗಿದೆ. #SITInvestigation pic.twitter.com/CWBSvEOR12
— Siddaramaiah (@siddaramaiah) September 20, 2025