HomeLatest NewsBREAKING: ಗಣೇಶ ಮೂರ್ತಿಗೆ ಚಪ್ಪಲಿ ಹಾಕಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯಿಂದ ಕೃತ್ಯ!

BREAKING: ಗಣೇಶ ಮೂರ್ತಿಗೆ ಚಪ್ಪಲಿ ಹಾಕಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯಿಂದ ಕೃತ್ಯ!

ಬೇಲೂರು: ಬೇಲೂರಿನಲ್ಲಿ ಗಣೇಶ ಮೂರ್ತಿಗೆ ಚಪ್ಪಲಿ ಹಾಕಿದ್ದ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯಿಂದಲೇ ಕೃತ್ಯ ನಡೆದಿದೆ.

ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಪುರಸಭೆ ಆವರಣದಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ದೇವಾಲಯದಲ್ಲಿ ಇಂದು ಬೆಳಿಗ್ಗೆ ಕಿಡಿಗೇಡಿಗಳು ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿರುವ ಘಟನೆ ನಡೆದಿದೆ. ಕಿಡಿಗೇಡಿಗಳ ಕೃತ್ಯ ಖಂಡಿಸಿ ಸಾರ್ವಜನಿಕರು, ಭಕ್ತರು ದೇವಾಲಯದ ಬಳಿ ಪ್ರತಿಭಟನೆ ನಡೆಸುತ್ತಿದ್ದು, ತಕ್ಷಣ ಕಿಡಿಗೇದಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ಈ ನಡುವೆ ದೇವಸ್ಥಾನದ ಸಿಸಿಟಿವಿಯಲ್ಲಿ ಮಹಿಳೆಯೊಬ್ಬಳು ಮುಖಮುಚ್ಚಿಕೊಂಡು ದೇವಸ್ಥಾನಕ್ಕೆ ಆಗಮಿಸಿರುವ ದೃಶ್ಯ ಸೆರೆಯಾಗಿದೆ. ಮಹಿಳೆಯೇ ಈ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. ಮುಖಮುಚ್ಚಿಕೊಂಡು ಬಂದಿದ್ದ ಮಹಿಳೆ ಕಾಲಿನಲ್ಲಿದ್ದ ಚಪ್ಪಲಿ ತೆಗೆದು ದೇವರ ಮೇಲೆ ಇಟ್ಟಿರುವ ಅನುಮಾನವಿದೆ. ದೇವಸ್ಥಾನಕ್ಕೆ ಮಹಿಳೆ ಎಂಟ್ರಿ ಕೊಡುವಾಗ ಆಕೆ ಕಾಲಿನಲ್ಲಿ ಚಪ್ಪಲಿ ಇತ್ತು. ಆದರೆ ದೇವಸ್ಥಾನದಿಂದ ವಾಪಸ್ ಹೋಗುವಾಗ ಕಾಲಿನಲ್ಲಿ ಚಪ್ಪಲಿ ಇರಲಿಲ್ಲ. ಈ ಹಿನ್ನೆಲೆಯಲ್ಲಿ ಮಹಿಳೆಯ ಮೇಲೆ ಅನುಮಾನ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular