ರಾಯ್ಪುರ: ಕಬಡ್ಡಿ ಪಂದ್ಯಾವಳಿ ವೇಳೆ ಏಕಾಏಕಿ ಬಿರುಗಾಳಿ ಬೀಸಿದ ಪರಿಣಾಮ ವಿದ್ಯುತ್ ತಂತಿ ತಗುಲಿ ಮೂವರು ಸಾವನ್ನಪ್ಪಿರುವ ಘಟನೆ ಛಂತ್ತೀಸ್ ಗಢದ ಕೊಂಡಗಾಂವ್ ನಲ್ಲಿ ನಡೆದಿದೆ.
ವಿದ್ಯುತ್ ತಂತಿ ಕಬಡ್ಡಿ ಟೆಂಟ್ ಗೆ ತಗುಲಿ ವಿದ್ಯುತ್ ಪ್ರವಹಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಬಡ್ಡಿ ಆಟಗಾರ ಸತೀಶ್ ನೇತಮ್, ಶ್ಯಾಮಲಾಲ್ ನೇತಮ್, ಸುನಿಲ್ ಶೋರಿ ಮೃತರು. ಘಟನೆಯಲ್ಲಿ ಇಬ್ಬರ ಸ್ಥಿತಿ ಗಂಭಿರವಾಗಿದೆ.
ರಾವಸ್ವಾಹಿ ಗ್ರಾಮದಲ್ಲಿ ಕಬಡ್ಡಿ ಪಂದ್ಯಾವಳಿ ಆಯೋಜಿಸಿದ್ದ ವೇಳೆ ಈ ದುರಂತ ಸಂಭವಿಸಿದೆ. ಬಿರುಗಾಳಿಯಿಂದಾಗಿ ಟೆಂಟ್ ನ ಕಬ್ಬಿಣದ ಕಂಬಕ್ಕೆ 11 ಕೆವಿ ಹೈಟೆನ್ಶನ್ ವಿದ್ಯುತ್ ತಂತಿ ತಗುಲಿ ಘಟನೆ ನಡೆದಿದೆ.