ತುಮಕೂರು: ಇಬ್ಬರು ಮಕ್ಕಳನ್ನು ಕತ್ತು ಸೀಳಿ ಕೊಂದ ತಾಯಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಇಲ್ಲಿನ ಪಾವಗಡ ತಾಲೂಕಿನ ಕಡಪಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಒಂದೂವರೆ ವರ್ಷದ ಮಗು ಹಾಗೂ ನಾಲ್ಕು ವರ್ಷದ ಮಗುವನ್ನು ಭೀಕರವಾಗಿ ಕೊಲೆಗೈದಿರುವ ತಾಯಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸರುತಾ (25) ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ. ಸರುತಾ ಪತಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಮನೆಗೆ ಬಂದಾಗ ಮಕ್ಕಳು ಹಾಗೂ ಪತಿ ಮೂವರು ಸಾವನ್ನಪ್ಪಿದ್ದಾರು. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಾವಗಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.