ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ತಿಪ್ಪಗಾನಹಳ್ಳಿ ಬಳಿ ನಡೆದಿದೆ.
ಮರಕ್ಕೆ ಕಾರ್ ಡಿಕ್ಕಿ ಹೊಡೆದಿದ್ದು, ಕಾರ್ ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ತಿಪ್ಪಗಾನಹಳ್ಳಿಯಲ್ಲಿ ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗೌರಿಬಿದನೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ. ಸ್ಥಳಕ್ಕೆ ಮಂಚೇನಹಳ್ಳಿ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.